ಬೆಂಗಳೂರು: 2019-20ನೇ ಸಾಲಿನ ಸಿಇಟಿ ಫಲಿತಾಂಶವನ್ನು ಡಿಸಿಎಂ ಅಶ್ವತ್ಥ ನಾರಾಯಣ ಪ್ರಕಟಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಸಿಇಟಿ ಫಲಿತಾಂಶ ಬಿಡುಗಡೆ ಮಾಡಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಈ ಬಾರಿ 1,94,419 ಅಭ್ಯರ್ಥಿಗಳು ಸಿಇಟಿ ನೋಂದಣಿ ಮಾಡಿದ್ದರು. ಅವರಲ್ಲಿ 1,75,368 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 1800 ವಿದ್ಯಾರ್ಥಿಗಳು ಹೊರ ರಾಜ್ಯದವರೇ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 497 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು ಎಂದರು.
ಕೊರೊನಾ ಸೋಂಕಿತ 63 ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. 21 ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ಅಕ್ಟೋಬರ್ ನಲ್ಲಿ ಆನ್ ಲೈನ್ ನಲ್ಲಿ ಕೌನ್ಸಲಿಂಗ್ ನಡೆಯಲಿದ್ದು, ಎರಡು ಬಾರಿ ಕೌನ್ಸಲಿಂಗ್ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಇಲಾಖೆ ವೆಬ್ ಸೈಟ್ ಗಳಾದ https://kea.kar.nic.in
https:// karresults.nic.in ನಲ್ಲೂ ಫಲಿತಾಂಶ ಲಭ್ಯವಾಗಲಿದೆ.