
ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಯನ್ನು ಈಗಾಗಲೇ ನಡೆಸಲಾಗಿದ್ದು, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದಾರೆ.
ಜುಲೈ 30 ರಿಂದ ಆಗಸ್ಟ್ 1ರ ವರೆಗೆ ಈ ಪರೀಕ್ಷೆಗಳು ನಡೆಯಬೇಕಿದ್ದು, ಆದರೆ ಕೊರೊನಾ ಸೋಂಕು ಪ್ರಕರಣಗಳಲ್ಲಿ ತೀವ್ರ ಹೆಚ್ಚಳ ಕಂಡುಬರುತ್ತಿರುವ ಕಾರಣ ಸಿಇಟಿ ಪರೀಕ್ಷೆ ಮುಂದೂಡುವ ಕುರಿತಂತೆ ಉನ್ನತ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಜುಲೈ ಮೂರನೇ ವಾರಕ್ಕೆ ನಿಗದಿಯಾಗಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ಸೆಪ್ಟಂಬರ್ ತಿಂಗಳಿಗೆ ಮುಂದೂಡಲಾಗಿದ್ದು, ಹೀಗಾಗಿ ಸಿಇಟಿ ಪರೀಕ್ಷೆ ಕುರಿತಂತೆ ಇದೇ ಹಾದಿಯನ್ನು ಅನುಸರಿಸಲು ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.