ಕೊರೊನಾ ಅಬ್ಬರದ ನಡುವೆಯೂ ವೃತ್ತಿಶಿಕ್ಷಣ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸುಸೂತ್ರವಾಗಿ ನಡೆದಿದ್ದು, ವಿದ್ಯಾರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.
ಆಗಸ್ಟ್ 20ರೊಳಗೆ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದು, ಇದಾದ ಬಳಿಕ ಸೀಟುಗಳ ಹಂಚಿಕೆ ಗಾಗಿ ಆನ್ಲೈನ್ ಕೌನ್ಸೆಲಿಂಗ್ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸೀಟು ಹಂಚಿಕೆ ಕುರಿತು ಎಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಸರ್ಕಾರದ ನಡುವಿನ ವಿಚಾರ ವಾರದಲ್ಲಿ ತೀರ್ಮಾನವಾಗಲಿದ್ದು, ಬಳಿಕ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ಹೇಳಿದ್ದಾರೆ.