ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.
ಶಿವಮೊಗ್ಗದ ವಿನೋಬ ನಗರದಲ್ಲಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಕಾಂಗ್ರೆಸ್ ನ ಎನ್.ಎಸ್.ಯು.ಐ. ವಿದ್ಯಾರ್ಥಿ ಘಟಕದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆಯಲು ಮುಂದಾಗಿದ್ದಾರೆ. ಆದರೂ ಬಗ್ಗದ ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಮನೆಗೆ ನುಗ್ಗಲು ಯತ್ನಿಸಿದ್ದಾರೆ.
ಈ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಪರಿಸ್ಥಿತಿ ಕೈ ಮೀರುತ್ತಿದ್ದಂತೆ 25ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.