ಆರ್ಥಿಕ ನೆರವು ಕೋರಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಡಜನತೆ ಅರ್ಜಿ ಸಲ್ಲಿಸುವ ಕುರಿತಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಮಧ್ಯವರ್ತಿಗಳು ನೆರವು ಕೋರಿ ಬರುವ ಬಡ ಜನತೆಗೆ ಶೋಷಿಸುವುದನ್ನು ತಡೆಗಟ್ಟುವ ಸಲುವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದ್ದು, ನೂತನ ತಂತ್ರಾಂಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಬಿಡುಗಡೆ ಮಾಡಿದ್ದಾರೆ.
ಮುಖ್ಯಮಂತ್ರಿ ಪರಿಹಾರ ನಿಧಿಗಾಗಿ ಅರ್ಜಿ ಸಲ್ಲಿಸುವವರು ಇನ್ನು ಮುಂದೆ ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾ ಸಿಂಧು ಕೇಂದ್ರಗಳಲ್ಲಿ ಅಥವಾ ಯಾವುದಾದರೂ ಅಂತರ್ಜಾಲ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ cmrf.karnataka.gov.in ಮತ್ತು sevasindhu.karnataka.gov.in ಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.