ಬೆಂಗಳೂರು: ಆಪರೇಷನ್ ಕಮಲಕ್ಕಾಗಿ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್ ಸಮ್ಮತಿ ಸೂಚಿಸಿದೆ.
ಜೆಡಿಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಆಮಿಷವೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್. ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಂ ಗೌಡ ಹಾಗೂ ಎಂ.ಬಿ. ಮರಮಕಲ್ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ರದ್ದು ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.
ರಮೇಶ್ ಜಾರಕಿಹೊಳಿ ಮೇಲೆ ಕಾನೂನಿನ ತೂಗುಗತ್ತಿ; ಅಜ್ಞಾತ ಸ್ಥಳಕ್ಕೆ ತೆರಳಿದ ʼಸಾಹುಕಾರ್ʼ
ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ತಡೆಯೊಡ್ಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ, ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಎಫ್ಐಆರ್ ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಯಡಿಯೂರಪ್ಪ ವಿರುದ್ಧ ತನಿಖೆ ನಡೆಸುವಂತೆ ಆದೇಶ ನೀಡಿದೆ.