alex Certify ಸಿಎಂ ಯಡಿಯೂರಪ್ಪಗೆ ಬಿಗ್ ಶಾಕ್: ರಾಜ್ಯಸಭೆಗೆ ‘ಅಚ್ಚರಿ’ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹೈಕಮಾಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಯಡಿಯೂರಪ್ಪಗೆ ಬಿಗ್ ಶಾಕ್: ರಾಜ್ಯಸಭೆಗೆ ‘ಅಚ್ಚರಿ’ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹೈಕಮಾಂಡ್

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಶಿಫಾರಸ್ಸು ಮಾಡಿ ಕಳುಹಿಸಲಾಗಿದ್ದ ಪಟ್ಟಿಯನ್ನು ತಿರಸ್ಕರಿಸಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಬೆಳಗಾವಿಯ ಈರಣ್ಣ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಅಭ್ಯರ್ಥಿಗಳನ್ನಾಗಿಸಿದ್ದು, ಹೀಗಾಗಿ ಟಿಕೆಟ್ ನಿರೀಕ್ಷೆಯಲ್ಲಿದ್ದ ರಮೇಶ್ ಕತ್ತಿ ಹಾಗೂ ಪ್ರಭಾಕರ್ ಕೋರೆ ಅವರಿಗೆ ತೀವ್ರ ನಿರಾಸೆಯಾಗಿದೆ.

ಬಿಜೆಪಿ ಕೋರ್ ಕಮಿಟಿ ಸಭೆ, ಎರಡು ರಾಜ್ಯಸಭಾ ಸ್ಥಾನಗಳಿಗಾಗಿ ರಮೇಶ್ ಕತ್ತಿ, ಪ್ರಭಾಕರ್ ಕೋರೆ ಹಾಗೂ ಪ್ರಕಾಶ್ ಶೆಟ್ಟಿ ಅವರ ಹೆಸರುಗಳನ್ನು ಹೈಕಮಾಂಡ್ ಗೆ ಶಿಫಾರಸ್ಸು ಮಾಡಿದ್ದು, ಆದರೆ ಈ ಮೂವರ ಹೆಸರನ್ನು ಪಕ್ಕಕ್ಕೆ ಸರಿಸಿರುವ ಬಿಜೆಪಿ ಹೈಕಮಾಂಡ್ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...