ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸ್ಯಾಂಡಲ್ ವುಡ್ ಹಿರಿಯ ನಟ, ಎಲ್ಲಾ ಕ್ಷೇತ್ರಗಳಲ್ಲೂ ಪ್ರಾಮಾಣಿಕತೆಗಿಂತ ವಾಮ ಮಾರ್ಗಗಳೇ ಪ್ರಧಾನವಾಗಿದೆ ಹಾಗಾಗಿ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಗ್ಗೇಶ್, ಸಿಡಿ ಪ್ರಕರಣದ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಆದರೆ ಒಂದು ಮಾತು ಹೇಳಬಲ್ಲೆ ಉಪ್ಪು ತಿಂದವನು ನೀರು ಕುಡಿಯಲೇಬೇಕು. ಇದೊಂದು ಮಾತು ಸಾಕು ಎಂಬುದು ನನ್ನ ಭಾವನೆ ಎಂದಿದ್ದಾರೆ.
ಸಂತ್ರಸ್ತ ಯುವತಿಯನ್ನು ಪತ್ತೆ ಮಾಡಲಾಗದಿರುವುದು ನಾಚಿಕೆಗೇಡಿನ ಸಂಗತಿ – ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ
ತಂತ್ರಕ್ಕೆ ಪ್ರತಿತಂತ್ರ ಈಗಿನ ಸೈದ್ಧಾಂತಿಕ ನೆಲೆ. ಮಾಜಿ ಸಿಎಂ ಕುಮಾರಸ್ವಾಮಿಯವರು ನನ್ನ ಸಿನಿಮಾಗಳ ನಿರ್ಮಾಪಕರು, ವಿತರಕರು ಆಗಿದ್ದರು. ಇನ್ನು ಡಿ.ಕೆ.ಶಿವಕುಮಾರ್ ನನ್ನ ರಾಜಕೀಯಕ್ಕೆ ಕರೆ ತಂದವರು ಎಲ್ಲರೂ ನನಗೆ ಉತ್ತಮ ಸ್ನೇಹಿತರು. ಆದರೆ ಈಗ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆಗಿಂತ ವಾಮ ಮಾರ್ಗಗಳೇ ಪ್ರಮುಖವಾಗಿದೆ ಎಂದು ಹೇಳಿದರು.