ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಬದಲಾಗಿ ಸಿಬಿಐಗೆ ವಹಿಸಬೇಕು ಎಂಬ ಒತ್ತಾಯಗಳು ಕೇಳಿ ಬಂದಿರುವ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಿಡಿ ತನಿಖೆಯನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಗೃಹ ಸಚಿವರು, ಸಿಡಿ ತನಿಖೆಯನ್ನು ಎಸ್ ಐಟಿ ಸಮರ್ಪಕವಾಗಿ ಮಾಡುತ್ತಿದೆ. ನಿಸ್ಪಕ್ಷಪಾತವಾಗಿ, ನ್ಯಾಯ ಸಮ್ಮತವಾಗಿ ತನಿಖೆ ನಡೆಸುತ್ತಿದೆ. ಹೀಗಾಗಿ ಎಸ್ ಐ ಟಿ ತನಿಖೆ ಮುಂದುವರೆಯಲಿದೆ ಎಂದು ಹೇಳಿದರು.
ತಾಕತ್ತಿದ್ದರೆ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿ ನೋಡು: ಯತ್ನಾಳ್ ಗೆ ರೇಣುಕಾಚಾರ್ಯ ಸವಾಲು
ಇದೇ ವೇಳೆ ಹೊರ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯದಲ್ಲಿ ಕಟ್ಟು ನಿಟ್ಟಿನ ಕ್ರಮ ಅನುಸರಿಸಲಾಗುತ್ತಿದೆ. ಶಾಲಾ ಕಾಲೇಜುಗಳ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತವೆ. ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.