ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಕಾಂಗ್ರೆಸ್ ಸದಸ್ಯರು ಧರಣಿ ನಡೆಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷದವರು ಕಾಲಹರಣ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದರು. ಪ್ರಕರಣದ ಬಗ್ಗೆ ಎಸ್ಐಟಿಯಿಂದ ತನಿಖೆ ಕೂಡ ನಡೆಸಲಾಗುತ್ತಿದೆ. ಆ ಹೆಣ್ಣುಮಗಳು ಬಂದು ಸ್ಪಷ್ಟವಾಗಿ ದೂರು ನೀಡುತ್ತಿಲ್ಲ. ದೂರು ನೀಡಿದರೆ ಪ್ರಕರಣಕ್ಕೆ ಒಂದು ಅಂತ್ಯ ಸಿಗುತ್ತದೆ. ಆದರೂ ಕೂಡ ವಿಪಕ್ಷ ನಾಯಕರು ಧರಣಿ ನಡೆಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಸತೀಶ್ ಜಾರಕಿಹೊಳಿ ಮೂಲೆಗುಂಪು ಮಾಡಲು ಪ್ರಯತ್ನ, ಬೆಂಬಲಿಗರ ಆಕ್ರೋಶ: ಬೈಎಲೆಕ್ಷನ್ ಸ್ಪರ್ಧೆಗೆ ವಿರೋಧ
ಕುಂಟು ನೆಪ ಹೇಳಿ ನಿನ್ನೆ ಸದನದಲ್ಲಿ ಧರಣಿ ಮಾಡಿದರು. ಪ್ರಕರಣದ ಬಗ್ಗೆ ತನಿಖೆಯನ್ನು ನಡೆಸುತ್ತಿದ್ದೇವೆ. ವಿಪಕ್ಷದವರಿಗೆ ಚರ್ಚಿಸಲು ಬೇರೆ ವಿಷಯವಿಲ್ಲದೇ ಕಾಲಹರಣ ಮಾಡುತ್ತಿದ್ದಾರೆ. ಸುಗಮ ಕಲಾಪಕ್ಕೆ ಅವಕಾಶ ನೀಡಬೇಕು ಎಂದು ಸಿಎಂ ಹೇಳಿದ್ದಾರೆ.