alex Certify ಸಿಡಿ ಪ್ರಕರಣ: ಸಂತ್ರಸ್ತೆಯನ್ನು ಮೆಡಿಕಲ್ ಟೆಸ್ಟ್ ಗೆ ಹಾಜರುಪಡಿಸಿದ ಎಸ್ಐಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಪ್ರಕರಣ: ಸಂತ್ರಸ್ತೆಯನ್ನು ಮೆಡಿಕಲ್ ಟೆಸ್ಟ್ ಗೆ ಹಾಜರುಪಡಿಸಿದ ಎಸ್ಐಟಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯನ್ನು ಎಸ್ಐಟಿ ಅಧಿಕಾರಿಗಳು ಮೆಡಿಕಲ್ ಟೆಸ್ಟ್ ಗೆ ಹಾಜರು ಪಡಿಸಿದ್ದಾರೆ.

ಸಿಡಿ ಪ್ರಕರಣ ಬೆಳಕಿಗೆ ಬಂದು 28 ದಿನಗಳ ಬಳಿಕ ಯುವತಿ ನಿನ್ನೆ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆಗಳನ್ನು ದಾಖಲಿಸಿದ್ದಳು. ಅಲ್ಲದೇ ಎಸ್ಐಟಿ ಮುಂದೆಯೂ ಹೇಳಿಕೆಗಳನ್ನು ದಾಖಲಿಸಿದ್ದಳು. ಇಂದೂ ಕೂಡ ಹೆಚ್ಚಿನ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟೀಸ್ ನೀಡಿತ್ತು. ಇದರ ಬೆನ್ನಲ್ಲೇ ಯುವತಿ ಇಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾಳೆ.

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ..? ಯುವತಿಗೆ ಎಸ್ಐಟಿಯಿಂದ ಮತ್ತೆ ವಿಚಾರಣೆ

ವಿಚಾರಣೆಗೆ ಹಾಜರಾದ ಯುವತಿಯನ್ನು ಎಸ್ಐಟಿ ತನಿಖಾಧಿಕಾರಿ ಕವಿತಾ ನೇತೃತ್ವದಲ್ಲಿ ಯುವತಿಯನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮೆಡಿಕಲ್ ಟೆಸ್ಟ್ ಗೆ ಹಾಜರುಪಡಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...