ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳ್ಳಿನ ಮೂಟೆ ಉರುಳಿಸಿ ಹೋಗಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಅವರದ್ದು ಕಾಮಾಲೆ ಕಣ್ಣು ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ, ಸಿದ್ದರಾಮಯ್ಯ ಇನ್ನೂ ಭೂತಕಾಲದಲ್ಲೇ ಇದ್ದಾರೆ. ರಾಜಕೀಯಕ್ಕಾಗಿ ಅನಗತ್ಯ ಹೇಳಿಕೆ ನೀಡುವುದನ್ನು ಅವರು ನಿಲ್ಲಿಸಲಿ ಎಂದರು.
ಇನ್ನು ನೂತನ ಸಚಿವರ ಖಾತೆ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಖಾತೆ ಹಂಚಿಕೆ ಸಿಎಂ ಪರಮಾಧಿಕಾರ. ಸಂಪುಟ ವಿಸ್ತರಣೆ, ಯಾರಿಗೆ ಯಾವ ಖಾತೆ ಎಲ್ಲವನ್ನೂ ಸಿಎಂ ಯಡಿಯೂರಪ್ಪನವರೇ ನಿರ್ಧರಿಸಿ ಹಂಚಿಕೆ ಮಾಡುತ್ತಾರೆ ಎಂದು ಹೇಳಿದರು.