ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಭಾವಿ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿಂದುಳಿದ ವರ್ಗಗಳ ನಾಯಕರೆಂದೇ ಗುರುತಿಸಲ್ಪಡುವ ಸಿದ್ದರಾಮಯ್ಯ ಸದ್ಯಕ್ಕೆ ರಾಜ್ಯ ಕಾಂಗ್ರೆಸ್ ನ ಮುಂಚೂಣಿ ನಾಯಕರು ಎಂಬುದರಲ್ಲಿ ಎರಡು ಮಾತಿಲ್ಲ.
ಪಕ್ಷದಲ್ಲಿ ತಮ್ಮದೇ ಆದ ಒಂದು ಇಮೇಜ್ ಸೃಷ್ಟಿಸಿಕೊಂಡಿದ್ದ ಸಿದ್ದರಾಮಯ್ಯನವರಿಗೆ ಬ್ರೇಕ್ ಹಾಕಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆಯಾ ಎಂಬ ಮಾತುಗಳು ಈಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದಕ್ಕೆ ಪೂರಕವೆಂಬಂತೆ ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪುಷ್ಟಿ ನೀಡುತ್ತಿವೆ.
ಈ ಹಿಂದೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಿಸಿದ್ದ ಕಾಂಗ್ರೆಸ್ ಹೈಕಮಾಂಡ್ ಈಗ ವಿಧಾನಪರಿಷತ್ ಚುನಾವಣೆಯಲ್ಲಿ ಬಿ.ಕೆ. ಹರಿಪ್ರಸಾದ್ ಅವರಿಗೆ ಮಣೆ ಹಾಕಿದೆ. ಸಿದ್ದರಾಮಯ್ಯನವರಿಗೆ ಪರ್ಯಾಯ ನಾಯಕರಾಗಿ ಹರಿಪ್ರಸಾದ್ ಅವರನ್ನು ಬೆಳೆಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ಅವರಿಗೆ ಟಿಕೆಟ್ ನೀಡಲಾಗಿದೆ ಎಂಬ ವ್ಯಾಖ್ಯಾನ ಕೇಳಿಬರುತ್ತಿದೆ.