ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಕೊರೊನಾ 07-08-2020 5:13PM IST / No Comments / Posted In: Karnataka, Latest News ಕೊರೊನಾ ಸೋಂಕಿಗೊಳಗಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವೇಳೆ ಟ್ವೀಟ್ ಮಾಡಿದ್ದ ಅವರು, ತಾವು ಆರೋಗ್ಯವಾಗಿದ್ದು, ತಮ್ಮೊಂದಿಗೆ ಸಂಪರ್ಕದಲ್ಲಿದ್ದವರು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯನವರ ಪುತ್ರ ಶಾಸಕ ಡಾ. ಯತೀಂದ್ರ ಅವರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಸ್ವತಃ ಯತೀಂದ್ರ ಅವರೇ ಟ್ವೀಟ್ ಮಾಡುವ ಮೂಲಕ ಈ ವಿಷಯ ತಿಳಿಸಿದ್ದಾರೆ. ಅಲ್ಲದೇ, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಯತೀಂದ್ರ ಕೋರಿದ್ದಾರೆ. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ. — Dr Yathindra Siddaramaiah (@Dr_Yathindra_S) August 7, 2020