alex Certify ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಕೊರೊನಾ

ಕೊರೊನಾ ಸೋಂಕಿಗೊಳಗಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವೇಳೆ ಟ್ವೀಟ್‌ ಮಾಡಿದ್ದ ಅವರು, ತಾವು ಆರೋಗ್ಯವಾಗಿದ್ದು, ತಮ್ಮೊಂದಿಗೆ ಸಂಪರ್ಕದಲ್ಲಿದ್ದವರು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಹೇಳಿದ್ದರು.

ಇದೀಗ ಸಿದ್ದರಾಮಯ್ಯನವರ ಪುತ್ರ ಶಾಸಕ ಡಾ. ಯತೀಂದ್ರ ಅವರಿಗೂ ಕೊರೊನಾ ಪಾಸಿಟಿವ್‌ ಬಂದಿದ್ದು, ಸ್ವತಃ ಯತೀಂದ್ರ ಅವರೇ ಟ್ವೀಟ್‌ ಮಾಡುವ ಮೂಲಕ ಈ ವಿಷಯ ತಿಳಿಸಿದ್ದಾರೆ.

ಅಲ್ಲದೇ, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಯತೀಂದ್ರ ಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...