ಸಿನಿಮಾ ಪ್ರಿಯರಿಗೆ ರಾಜ್ಯ ಸರ್ಕಾರ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಪ್ರಸ್ತುತ ಚಿತ್ರಮಂದಿರಗಳಲ್ಲಿ ಶೇಕಡ 50ರಷ್ಟು ಸೀಟುಗಳ ಭರ್ತಿಗೆ ಅವಕಾಶವಿದ್ದು, ಇದನ್ನು ಈ ಮೊದಲಿನಂತೆ ಶೇಕಡಾ 100 ರಷ್ಟು ಭರ್ತಿಗೆ ಅನುಮತಿ ನೀಡುವ ನಿರೀಕ್ಷೆಯಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆಗೆ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಮಲೆನಾಡು ಭಾಗದ ಶಾಸಕರೊಬ್ಬರು ಚಿತ್ರಮಂದಿರಗಳಲ್ಲಿ ಶೇಕಡಾ 100 ಸೀಟುಗಳ ಭರ್ತಿಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಕುರಿತು ಪರಿಶೀಲಿಸುವ ಭರವಸೆ ನೀಡಿದ್ದಾರೆ. ಈಗಾಗಲೇ ತಮಿಳುನಾಡಿನಲ್ಲಿ ಚಿತ್ರಮಂದಿರದ ಶೇಕಡ ನೂರರಷ್ಟು ಸೀಟುಗಳ ಭರ್ತಿಗೆ ಅವಕಾಶವಿದ್ದು, ರಾಜ್ಯದಲ್ಲೂ ಇದೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.