ಬೆಂಗಳೂರು: ಬೆಳ್ಳಂ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ನಡೆಸುತ್ತಿದ್ದಂತೆಯೇ ಗರಂ ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮನೆ ಬಾಗಿಲಲ್ಲೇ ಅಧಿಕಾರಿಗಳನ್ನು ತಡೆದು ನಿಲ್ಲಿಸಿ ಪ್ರಶ್ನಿಸಿದ್ದಾರೆ.
ಮುಂಜಾನೆ 6 ಗಂಟೆಗೆ ಬೆಂಗಳೂರಿನ ಸದಾಶಿವ ನಗರ ನಿವಾಸದ ಮೇಲೆ ದಾಳಿಗೆ ಬಂದ ಸಿಬಿಐ ಅಧಿಕಾರಿಗಳನ್ನು ಕಂಡು ಶಾಕ್ ಆದ ಡಿ.ಕೆ. ಶಿವಕುಮಾರ್ ಬಲವಂತದ ಕ್ರಮಕ್ಕೆ ಕೋರ್ಟ್ ತಡೆ ನೀಡಿದ್ದು, ಮನೆ ಮೇಲೆ ದಾಳಿ ನಡೆಸುವಂತಿಲ್ಲ ಎಂದು ಅಧಿಕಾರಿಗಳ ಜೊತೆ ವಾಗ್ವಾದಕ್ಕಿಳಿದಿದ್ದರು ಎನ್ನಲಾಗಿದೆ.
ನಿನ್ನೆ ಕೋರ್ಟ್, ಡಿ.ಕೆ ಶಿವಕುಮಾರ್ ಮನೆ ಮೇಲೆ ಬಲವಂತದ ಕ್ರಮದಿಂದ ದಾಳಿ ನಡೆಸುವಂತಿಲ್ಲ ಎಂದು ಆದೇಶ ನೀಡಿದೆ. ಕೋರ್ಟ್ ತಡೆ ನೀಡಿದ್ದರೂ ಕೂಡ ಈ ರೀತಿ ದಾಳಿ ನಡೆಸುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ. ಆದರೆ ಸಿಬಿಐ ಅಧಿಕಾರಿಗಳು ಕೋರ್ಟ್ ತಡೆ ಬಗ್ಗೆ ನಮಗೆ ಮಾಹಿತಿ ಇಲ್ಲ. ನಾವು ಎಫ್ಐಆರ್ ದಾಖಲಿಸಿ ಪರಿಶೀಲನೆ ನಡೆಸುತ್ತಿರುತ್ತಿರುವುದಾಗಿ ಹೇಳಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.