ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಶ್ವಾನ ದಾಳಿ ಹೆಚ್ಚುತ್ತಿದ್ದು, ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
10ಕ್ಕೂ ಹೆಚ್ಚು ಜನರ ಮೇಲೆ ನಾಯಿ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲದ ನಾಲ್ಕನೇ ಬ್ಲಾಕ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೃದಯಾಘಾತಕ್ಕೆ ತುತ್ತಾದ ಮಾಲೀಕನ ಪ್ರಾಣ ರಕ್ಷಿಸಿದ ಶ್ವಾನ
ಬಿಬಿಎಂಪಿ ಬೀದಿ ನಾಯಿಗಳಿಗೆ ಕಡಿವಾಣ ಹಾಕದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಕಾಟ ಹೆಚ್ಚುತ್ತಿದ್ದು, ಆತಂಕವನ್ನುಂಟು ಮಾಡಿದೆ.