alex Certify ಸಿಲಿಕಾನ್ ಸಿಟಿಯಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಕಾನ್ ಸಿಟಿಯಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್ಐಎ ಅಧಿಕಾರಿಗಳ ತಂಡ ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.

ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್ಐಎ ಟೀಮ್, ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದೆ.

ಕಳೆದ ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿ ಡಾ.ಬ್ರೇವ್ ಬಸವನಗುಡಿ ಅಲಿಯಾಸ್ ಅಬ್ದುಲ್ ರೆಹಮಾನ್ ನನ್ನು ಬಂಧಿಸಲಾಗಿತ್ತು. ಆತನ ಮಾಹಿತಿ ಮೇರೆಗೆ ಇನ್ನಿಬ್ಬರು ಶಂಕಿತ ಉಗ್ರರಾದ ಅಬ್ದುಲ್ ಖಾದರ್, ಇರ್ಫಾನ್ ಎಂಬುವವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಬಂಧಿತರಿಂದ ಸಾಕಷ್ಟು ಮಾಹಿತಿ ಕಲೆ ಹಾಕಿರುವ ಎನ್ಐಎ ತಂಡ ಇದೀಗ ಇನ್ನಿಬ್ಬರು ಶಂಕಿತ ಉಗ್ರರನ್ನು ಬಂಧಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...