ಬೆಂಗಳೂರು: ಮಾದಕ ವಸ್ತು ಜಾಲದ ವಿರುದ್ಧ ಸಮರ ಮುಂದುವರೆದಿದ್ದು, ಬೆಂಗಳೂರಿನಲ್ಲಿ ಮತ್ತಿಬ್ಬರು ಮೋಸ್ಟ್ ವಾಂಟೆಡ್ ಡ್ರಗ್ಸ್ ಪೆಡ್ಲರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪ್ರೀತಿಪಾಲ್ ರೈ ಅಲಿಯಾಸ್ ಪೃಥ್ವಿ ಹಾಗೂ ಖಲಂದರ್ ಎಂದು ಗುರುತಿಸಲಾಗಿದೆ. ಡ್ರಗ್ಸ್ ಪೆಡ್ಲರ್ ಪೃಥ್ವಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಪ್ರಕರಣಗಳು ದಾಖಲಾಗಿದ್ದವು. ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರಿನ ಮುನಿಚೆನ್ನಪ್ಪ ಕಲ್ಯಾಣ ಮಂಟಪದ ಬಳಿ ಆರೋಪಿಗಳಿಬ್ಬರು ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಬಂಧಿತರಿಂದ 214.5 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.