ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕೋವಿಡ್ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಬಿಬಿಎಂಪಿ ಭಾರಿ ದಂಡ ವಿಧಿಸಲು ಮುಂದಾಗಿದೆ.
ಸಧ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಗೆ 250 ರೂಪಾಯಿ ದಂಡ ವಿಧಿಸಲಾಗುತ್ತಿದೆ. ಇನ್ಮುಂದೆ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ ವಸೂಲಿ ಮಾಡಲು ನಿರ್ಧರಿಸಲಾಗಿದೆ.
ಸಮಯ ಪ್ರಜ್ಞೆ ಮೆರೆದ ಮಹಿಳೆ: ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ATM ಕಳ್ಳ
ನಗರದಲ್ಲಿ ಮಾಲ್, ಥಿಯೇಟರ್, ಮಾರ್ಕೆಟ್, ಅಂಗಡಿಗಳು ತೆರೆದಿದ್ದು, ಸಾರ್ವಜನಿಕರ ಓಡಾಟವೂ ಹೆಚ್ಚುತ್ತಿದೆ. ಇದೇ ವೇಳೆ ಕೊರೊನಾ ಸೋಂಕು ಕೂಡ ವ್ಯಾಪಕವಾಗಿ ಹರಡುತ್ತಿದೆ. ಇನ್ನು ಬೆಳ್ಳಂದೂರು, ಶಾಂತಿನಗರ, ಉತ್ತರ ಹಳ್ಳಿ, ಹೆಚ್ ಎಸ್ ಆರ್ ಲೇಔಟ್ ಕೊರೊನ ಅಹಾಟ್ ಸ್ಪಾಟ್ ಗಳಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪಾಲಿಕೆ ಮುಂದಾಗಿದ್ದು, ದಂಡದ ಪ್ರಮಾಣವನ್ನು ಹೆಚ್ಚಿಸುತ್ತಿದೆ.