alex Certify ಸಿಸಿಬಿ ಕಚೇರಿಗೆ ಹಾಜರಾದ ಅಕುಲ್ ಬಾಲಾಜಿ; ನನಗೂ ಇದಕ್ಕೂ ಸಂಬಂಧವಿಲ್ಲ ಎಂದ ನಿರೂಪಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಸಿಬಿ ಕಚೇರಿಗೆ ಹಾಜರಾದ ಅಕುಲ್ ಬಾಲಾಜಿ; ನನಗೂ ಇದಕ್ಕೂ ಸಂಬಂಧವಿಲ್ಲ ಎಂದ ನಿರೂಪಕ

ಬೆಂಗಳೂರು: ನನಗೂ ಈ ಡ್ರಗ್ಸ್ ಪಾರ್ಟಿಗಳಿಗೂ ಯಾವುದೇ ಸಂಬಂಧವಿಲ್ಲ. ಸಿಸಿಬಿ ತನಿಖೆಗೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ನಿರೂಪಕ ಅಕುಲ್ ಬಾಲಾಜಿ ಹೇಳಿದ್ದಾರೆ.

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟೀಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಅಕುಲ್ ಬಾಲಾಜಿ ಚಾಮರಾಜಪೇಟೆ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದು, ಈ ವೇಳೆ ಮಾತನಾಡಿದ ಅವರು, ಸಿಸಿಬಿ ಕೇಳುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ. ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾನು ತಪ್ಪು ಮಾಡಿಲ್ಲ ಎಂದ ಮೇಲೆ ಹೆದರುವ ಅಗತ್ಯವಿಲ್ಲ ಎಂದು ಹೇಳಿದರು.

ಆರೋಪಿಗಳು ನನ್ನ ಹೆಸರು ಹೇಳಿದ್ದಾರೆ ಎನ್ನಲಾಗಿದೆ. ಆದರೆ ಅವರಾರೂ ನನಗೆ ಗೊತ್ತೇ ಇಲ್ಲ. ನನ್ನ ಫಾರ್ಮ್ ಹೌಸ್ ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಇನ್ನು ಈಗಾಗಲೇ ಡ್ರಗ್ಸ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಕಚೇರಿಯಲ್ಲಿ ನಿರೂಪಕ ಅಕುಲ್ ಬಾಲಾಜಿ ವಿಚಾರಣೆ ಆರಂಭವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...