ರಾಜ್ಯದಲ್ಲಿ ಮಿತಿಮೀರುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕಂಪ್ಲೀಟ್ ಲಾಕ್ಡೌನ್ ಘೋಷಿಸಲಾಗಿದೆ. ಅಗತ್ಯ ವಸ್ತುಗಳ ಸಾಗಾಟ ಹೊರತುಪಡಿಸಿ ಉಳಿದೆಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರು ಸಹ ಅನಗತ್ಯವಾಗಿ ತಮ್ಮ ಮನೆಗಳಿಂದ ಹೊರ ಬರದಂತೆ ಕಟ್ಟುನಿಟ್ಟಾದ ಸೂಚನೆ ನೀಡಲಾಗಿದ್ದು, ಒಂದೊಮ್ಮೆ ಇದನ್ನು ಉಲ್ಲಂಘಿಸಿ ಸುಖಾಸುಮ್ಮನೆ ಬೀದಿಗಿಳಿದರೆ ಕೇಸ್ ಹಾಕುವುದರ ಜೊತೆಗೆ ಅಂತವರು ತಂದ ವಾಹನಗಳನ್ನು ಸೀಜ್ ಮಾಡಲಾಗುತ್ತದೆ. ಈ ಕುರಿತಂತೆ ಪೊಲೀಸರಿಗೆ ಈಗಾಗಲೇ ಸೂಚನೆ ನೀಡಲಾಗಿದೆ.
ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಸರ್ಪಗಾವಲು ಹಾಕಿದ್ದು, ಸಂಚಾರ ನಡೆಸುವವರನ್ನು ತಡೆದು ಪ್ರಶ್ನಿಸುತ್ತಿದ್ದಾರೆ. ಸೂಕ್ತ ಕಾರಣ ನೀಡದೆ ಇದ್ದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರು ಕಂಪ್ಲೀಟ್ ಲಾಕ್ಡೌನ್ ಅವಧಿಯಲ್ಲಿ ಹೊರ ಬಾರದಿರುವುದು ಸೂಕ್ತ.