ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿ, ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ, ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಮತ್ತೆ ನಾನು ಗೆದ್ದು ಎದ್ದು ಬರುವೆನು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿರುವ ವಿನಯ್ ಕುಲ್ಕರ್ಣಿ, ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು. ಸತ್ಯಕ್ಕೆ ಸೋಲಿಲ್ಲ ಎಂದು ಹೇಳಿದ್ದಾರೆ.
ನನ್ನ ಪ್ರೀತಿ ಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗಲ್ಲ ಎಂದಿದ್ದಾರೆ.
