ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಿನ್ನೆ ಒಂದೇ ದಿನ 2 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈ ಸೋಂಕಿತರ ಸಂಖ್ಯೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುತ್ತದೆ ಎನ್ನುತ್ತಿವೆ ಅನೇಕ ವರದಿಗಳು. ಇದೀಗ ಹೆಚ್ಚು ಸೋಂಕು ಇರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 5 ನೇ ಸ್ಥಾನದಲ್ಲಿದೆ.
ಹೌದು, ನಿನ್ನೆಯ ಹೆಲ್ತ್ ಬುಲೆಟಿನ್‌ನಲ್ಲಿ ಬಂದ ಸೋಂಕಿತ ಪ್ರಕರಣಗಳು ಸೇರಿ ರಾಜ್ಯದಲ್ಲಿ ಒಟ್ಟು 38843ಕ್ಕೆ ಏರಿಕೆಯಾಗಿದೆ. ಇದರಲ್ಲಿ ಇಲ್ಲಿಯವರೆಗೆ 15411 ಮಂದಿ ಗುಣಮುಖರಾಗಿದ್ದಾರೆ. 686 ಮಂದಿಯ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 5 ನೇ ಸ್ಥಾನಕ್ಕೆ ತಲುಪಿದೆ.
ಇತ್ತ ಭಾರತ ಕೂಡ ವಿಶ್ವದ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಏರಿದೆ. ಸೋಂಕಿತರ ಸಂಖ್ಯೆ 8,79,466 ಕ್ಕೆ ಏರಿಕೆಯಾಗಿದೆ. ಇದರಲ್ಲಿ 5,54,429 ಮಂದಿ ಗುಣಮುಖರಾಗಿದ್ದು, 23,187 ಮಂದಿ ಸಾವನ್ನಪ್ಪಿದ್ದಾರೆ. ಒಟ್ನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ಅದರಲ್ಲು ಬೆಂಗಳೂರಿನಲ್ಲಿ ಅತಿ ಹೆಚ್ಚು ಸೋಂಕು ಕಂಡು ಬರುತ್ತಿದೆ. ಹೀಗಾಗಿ ನಾಳೆ ರಾತ್ರಿ 8 ಗಂಟೆಯಿಂದ ಬೆಂಗಳೂರು ಹಾಗೂ ಬೆಂ.ಗ್ರಾಮಾಂತರ ಜಿಲ್ಲೆಗಳನ್ನು ಒಂದು ವಾರಗಳ ಕಾಲ ಲಾಕ್‌ಡೌನ್ ಮಾಡಲಾಗುತ್ತಿದೆ.