alex Certify ಸೋನಿಯಾ ಗಾಂಧಿ ಆರೋಗ್ಯಕ್ಕೆ ಪ್ರಾರ್ಥಿಸಿ ಯುವ ಕಾಂಗ್ರೆಸ್ ನಿಂದ ವಿಶೇಷ ಪೂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋನಿಯಾ ಗಾಂಧಿ ಆರೋಗ್ಯಕ್ಕೆ ಪ್ರಾರ್ಥಿಸಿ ಯುವ ಕಾಂಗ್ರೆಸ್ ನಿಂದ ವಿಶೇಷ ಪೂಜೆ

ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅನಾರೋಗ್ಯಕ್ಕೊಳಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಯುವ ಕಾಂಗ್ರೆಸ್ ಕಾರ್ಯಕರ್ತರು, ಸೋನಿಯಾ ಗಾಂಧಿ ಅವರ ಆರೋಗ್ಯಕ್ಕೆ ಪ್ರಾರ್ಥಿಸಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಶುಕ್ರವಾರದಂದು ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಈ ಪ್ರಾರ್ಥನೆ ನಡೆದಿದ್ದು, ದೇವಾಲಯದ ಪ್ರಧಾನ ಅರ್ಚಕ ಅ.ಪ. ರಾಮಭಟ್ಟ ಪೂಜೆ ನೆರವೇರಿಸಿದ್ದಾರೆ.

ಸೋನಿಯಾ ಗಾಂಧಿ ಅವರ ಹೆಸರಿನಲ್ಲಿ ಅರ್ಚನೆ, ರುದ್ರಾಭಿಷೇಕ ಹಾಗೂ ಸಾವಿರ ಗರಿಕೆ ಅರ್ಪಿಸಿ ಪೂಜೆ ಸಲ್ಲಿಸಲಾಗಿದ್ದು, ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಯೋಗೀಶ್, ರೇಖಾ ರಂಗನಾಥ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ ಮೊದಲಾದವರು ಹಾಜರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...