ನವದೆಹಲಿ: ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಮೀಸಲಾತಿ ಪಟ್ಟಿ ವಿರೋಧಿಸಿ ಸಲ್ಲಿಕೆ ಮಾಡಲಾಗಿದ್ದರಿಂದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡುವವರೆಗೆ ಚುನಾವಣೆಯ ಫಲಿತಾಂಶ ಪ್ರಕಟಿಸಬಾರದು ಎಂದು ಹೇಳಲಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಿಗದಿಯಂತೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದ್ದರೂ ಹೈಕೋರ್ಟ್ ತೀರ್ಪು ನೀಡುವವರೆಗೆ ಫಲಿತಾಂಶ ಪ್ರಕಟಿಸದಂತೆ ತಿಳಿಸಿದೆ.
ನ್ಯಾಯಮೂರ್ತಿ ಎ.ಎಂ. ಕನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ಚುನಾವಣಾ ಆಯೋಗಕ್ಕೆ ಈ ಕುರಿತು ನಿರ್ದೇಶನ ನೀಡಿದ್ದು ಒಂದು ತಿಂಗಳ ಒಳಗೆ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸುವಂತೆ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಸೂಚನೆ ನೀಡಲಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನದ ಚುನಾವಣೆಯನ್ನು ನವೆಂಬರ್ 2 ರೊಳಗೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದು ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.