ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇಲೇ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದವರು ನಮ್ಮ ಮಾವನ ಮಕ್ಕಳಲ್ಲ, ಹಾಗಾಗಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ನಂದಿಬೆಟ್ಟದಲ್ಲಿ ಮಾತನಾಡಿದ ಸುಧಾಕರ್, ಪ್ರಕರಣದಲ್ಲಿ ಭಾಗಿಯಾದ ಯಾರನ್ನೇ ಆಗಲಿ, ಎಷ್ಟೇ ಪ್ರಭಾವಿಗಳಿರಲಿ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಘಟನೆ ಬಗ್ಗೆ ನಿರ್ಲಕ್ಷ್ಯ ವಹಿಸಿದ ಇಬ್ಬರು ಪೊಲೀಸರನ್ನು ಕೂಡ ಅಮಾನತು ಮಾಡಲಾಗಿದೆ. ಪೊಲೀಸರ ನಿರಂತರ ದಾಳಿಯಿಂದ ಇನ್ನಷ್ಟು ಕ್ರಷರ್ ಮಾಲೀಕರಿಗೆ ಭಯವಾಗಿದೆ ಎಂದರು.
ಬೆಚ್ಚಿಬೀಳಿಸುವಂತಿದೆ ಮಹಾರಾಷ್ಟ್ರದಲ್ಲಿ ಏರಿಕೆಯಾಗುತ್ತಿರುವ ʼಕೊರೊನಾʼ ಸೋಂಕಿತರ ಸಂಖ್ಯೆ
ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದರು. ಘಟನೆ ಬಳಿಕ ತಲೆ ಮರೆಸಿಕೊಂಡಿದ್ದ ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ಶಿರಡಿಸಾಯಿ ಅಗ್ರಿಗೇಟ್ಸ್ ಕ್ವಾರಿ, ಭ್ರಮರವಾಸಿನಿ ಕ್ರಷರ್ ಮಾಲೀಕ ನಾಗರಾಜು ರೆಡ್ದಿ ಹಾಗೂ ಸ್ಫೋಟಕ ಸರಬರಾಜು ಮಾಡಿದ್ದ ಆರೋಪಿ ಗಣೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.