alex Certify ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸಿಸಿಬಿ ಖೆಡ್ಡಾಗೆ ಮಾಸ್ಟರ್ ಮೈಂಡ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸಿಸಿಬಿ ಖೆಡ್ಡಾಗೆ ಮಾಸ್ಟರ್ ಮೈಂಡ್…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು, ಇನ್ನೆರಡು ದಿನಗಳಲ್ಲಿ ಡ್ರಗ್ಸ್ ಪ್ರಕರಣದ ಮಾಸ್ಟರ್ ಮೈಂಡ್ ನನ್ನು ಬಂಧಿಸಲು ಸಿಸಿಬಿ ಭಾರಿ ಸಿದ್ಧತೆ ನಡೆಸಿದೆ. ಈತನ ಬಂಧನದ ಮೂಲಕ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಗಲಿದೆ.

ಈಗಾಗಲೇ ಬಂಧನದಲ್ಲಿರುವ ಡ್ರಗ್ಸ್ ಪೆಡ್ಲರ್ ಗಳಿಗೆ ಹಾಗೂ ಆರೋಪಿಗಳಿಗೆ ಈತ ಡ್ರಗ್ಸ್ ಪೂರೈಸುತ್ತಿದ್ದ. ಈತನೇ ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಎಂದು ತಿಳಿದುಬಂದಿದೆ.

ಡಾರ್ಕ್ ವೆಬ್ ನಲ್ಲಿ ನಕಲಿ ಅಕೌಂಟ್ ಕ್ರಿಯೇಟ್ ಮಾಡಿ ಈತ ಡ್ರಗ್ಸ್ ಖರೀದಿ ಮಾಡುತ್ತಿದ್ದ. ಹೀಗೆ ಖರೀದಿ ಮಾಡಿದ ಡ್ರಗ್ಸ್ ಗಳನ್ನು ಒಂದೇ ಸಲ 10-12 ಪೆಡ್ಲರ್ ಗಳಿಗೆ ತಂದು ಕೊಡುತ್ತಿದ್ದ. ಈತನಿಂದ ಡ್ರಗ್ಸ್ ಪಡೆದ ಪೆಡ್ಲರ್ ಗಳು ನಟ-ನಟಿಯರು, ರಾಜಕಾರಣಿಗಳ ಮಕ್ಕಳು, ಉದ್ಯಮಿಗಳ ಮಕ್ಕಳಿಗೆ ನೀಡುತ್ತಿದ್ದರು.

ಈ ನಿಟ್ಟಿನಲ್ಲಿ ಡ್ರಗ್ಸ್ ಪ್ರಕರಣದ ಮಾಸ್ಟರ್ ಮೈಂಡ್ ನನ್ನು ಖೆಡ್ಡಾಗೆ ಕೆಡವಲು ಸಿಸಿಬಿ ಸಿದ್ಧತೆ ನಡೆಸಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ಈತನ ಬಂಧನವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...