ಬೆಂಗಳೂರು: ಡ್ರಗ್ಸ್ ಮಾಫಿಯಾ ಜೊತೆ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅ.23ರವರೆಗೆ ವಿಸ್ತರಣೆ ಮಾಡಿ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಈ ನಡುವೆ ರಾಗಿಣಿ ಹಾಗೂ ಸಂಜನಾ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ