ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್.ಸಿ.ಬಿ. (ಮಾದಕ ವಸ್ತು ನಿಯಂತ್ರಣ ಸಂಸ್ಥೆ) ಕೂಡ ಅಖಾಡಕ್ಕೆ ಇಳಿದಿದ್ದು, ಶೀಘ್ರದಲ್ಲೇ ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಬ್ಬರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಸಿ.ಬಿ. ವಿಚಾರಣೆ ವೇಳೆ ಕಾರ್ಪೊರೇಟರ್ ಪುತ್ರ ಯಶಸ್ ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಬ್ಬರ ಹೆಸರು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಮಾಹಿತಿ ಕಲೆ ಹಾಕುತ್ತಿರುವ ಎನ್.ಸಿ.ಬಿ., ಸ್ಟಾರ್ ನಟನಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ.
ಈಗಾಗಲೇ ಡ್ರಗ್ಸ್ ಪ್ರಕರಣ ಸಂಬಂಧ ಸ್ಯಾಂಡಲ್ ವುಡ್ ನ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಜೈಲು ಸೇರಿದ್ದು, ಇದರ ಬೆನ್ನಲ್ಲೇ ಇದೀಗ ಸ್ಟಾರ್ ನಟನಿಗೂ ಸಂಕಷ್ಟ ಎದುರಾಗಲಿದೆಯಾ ಕಾದು ನೋಡಬೇಕಿದೆ.