alex Certify ಸ್ಯಾಂಡಲ್ ವುಡ್ ಸ್ಟಾರ್ ನಟನಿಗೆ ಶಾಕ್ ನೀಡಲಿದೆಯಾ NCB…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಡಲ್ ವುಡ್ ಸ್ಟಾರ್ ನಟನಿಗೆ ಶಾಕ್ ನೀಡಲಿದೆಯಾ NCB…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್.ಸಿ.ಬಿ. (ಮಾದಕ ವಸ್ತು ನಿಯಂತ್ರಣ ಸಂಸ್ಥೆ) ಕೂಡ ಅಖಾಡಕ್ಕೆ ಇಳಿದಿದ್ದು, ಶೀಘ್ರದಲ್ಲೇ ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಬ್ಬರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಸಿ.ಬಿ. ವಿಚಾರಣೆ ವೇಳೆ ಕಾರ್ಪೊರೇಟರ್ ಪುತ್ರ ಯಶಸ್ ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಬ್ಬರ ಹೆಸರು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಮಾಹಿತಿ ಕಲೆ ಹಾಕುತ್ತಿರುವ ಎನ್.ಸಿ.ಬಿ., ಸ್ಟಾರ್ ನಟನಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ.

ಈಗಾಗಲೇ ಡ್ರಗ್ಸ್ ಪ್ರಕರಣ ಸಂಬಂಧ ಸ್ಯಾಂಡಲ್ ವುಡ್ ನ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಜೈಲು ಸೇರಿದ್ದು, ಇದರ ಬೆನ್ನಲ್ಲೇ ಇದೀಗ ಸ್ಟಾರ್ ನಟನಿಗೂ ಸಂಕಷ್ಟ ಎದುರಾಗಲಿದೆಯಾ ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...