ಹಾಸನ: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವರ ದರ್ಶನಕ್ಕೆ ತೆರೆಬಿದ್ದಿದೆ. ದೇವಾಲಯದ ಬಾಗಿಲನ್ನು ಜಿಲ್ಲಾಡಳಿತ ಬಂದ್ ಮಾಡಿದೆ.
ಹಾಸನಾಂಬೆ ಜಾತ್ರೆ ಹಿನ್ನೆಲೆಯಲ್ಲಿ ನ.5ರಿಂದ 12 ದಿನಗಳ ಕಾಲ ದೇವಾಲಯದ ಬಾಗಿಲು ತೆರೆಯಲಾಗಿತ್ತು. ಕೊರೊನಾ ಕಾರಣಕ್ಕೆ ಈ ಬಾರಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶವಿರಲಿಲ್ಲ.
ಇದೀಗ ಶಾಸ್ತ್ರೋಕ್ತವಾಗಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಜಿಲ್ಲಾಧಿಕಾರಿ ಗಿರೀಶ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಹಾಸನಾಂಬೆ ದೇವಾಲಯದ ಬಾಗಿಲನ್ನು ಮುಚ್ಚಲಾಯಿತು.
ಹಾಸನಾಂಬೆ ದೇವಾಲಯದ ಬಾಗಿಲನ್ನು ಒಂದು ದಿನದ ಮುಂಚಿತವಾಗಿಯೇ ಜಿಲ್ಲಾಡಳಿತ ಮುಚ್ಚಿರುವುದಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.