ಇತ್ತೀಚೆಗೆ ಹಿಂದಿ ದಿವಸ್ ಕುರಿತು ಕರ್ನಾಟಕದಲ್ಲಿ ಸಾರ್ವಜನಿಕರು ಹಾಗೂ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು, ಇದೀಗ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ ಈ ಕುರಿತು ಟ್ವೀಟ್ ಮಾಡಿದ್ದಾರೆ.
ಸುಲಿದಿತ್ತ ರಸಬಾಳೆಯಷ್ಟು ಸುಲಲಿತವಾದ ಭಾಷೆ ನಮ್ಮದಿರುವಾಗ, ಇನ್ನೊಂದು ಭಾಷೆಯ ಅಗತ್ಯವಾದರೂ ಏನು..?ನಾವು ಕನಸು ಕಾಣೋ ಭಾಷೆ, ನಮ್ಮ ನಾಲಿಗೆಯಲಾಡಲು ಬಿಡಿ. ಓಲೈಸುವ ನೆಪದಿ ನಮ್ಮ ಕಂದಮ್ಮಗಳಾಡೋ ‘ಅಮ್ಮ’ ಪದದಿಂದ ‘ಅ’ ತೆಗೆದು ‘ಮಾ’ ಉಳಿಸುವ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ..! ಜೈ ಕರ್ನಾಟಕ ಮಾತೆ ಎಂದು ರಿಷಬ್ ಶೆಟ್ಟಿ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.