alex Certify ಹುಟ್ಟುಹಬ್ಬದ ಆಚರಣೆಯಲ್ಲಿ ತಲ್ವಾರ್ ಹಿಡಿದು ಕುಣಿದು ಕುಪ್ಪಳಿಸಿದ ಯುವಕರು: 7 ಜನರ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಆಚರಣೆಯಲ್ಲಿ ತಲ್ವಾರ್ ಹಿಡಿದು ಕುಣಿದು ಕುಪ್ಪಳಿಸಿದ ಯುವಕರು: 7 ಜನರ ಬಂಧನ

ಕಲಬುರ್ಗಿ: ಹುಟ್ಟುಹಬ್ಬದ ಆಚರಣೆ ವೇಳೆ ಯುವಕರ ಗುಂಪು ತಲ್ವಾರ್ ಹಿಡಿದು, ಹಾಡಿಗೆ ಸ್ಟೆಪ್ ಹಾಕಿ ಕುಣಿದು ಕುಪ್ಪಳಿಸಿದ್ದು, ಇದೀಗ 7 ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ತಬ್ರೇಜ್, ಇಮ್ರಾನ್, ಅಪ್ರೋಜ್, ರಶೀದ್, ತಲ್ಹಾ, ಸೋಹೆಲ್ ಹಾಗೂ ಜಹೀರ್ ಬಂಧಿತ ಆರೋಪಿಗಳು.

ಅನುಮತಿಯಿಲ್ಲದೇ ಸಾರ್ವಜನಿಕ ಸ್ಥಳದಲ್ಲಿ ವೇದಿಕೆ ಹಾಕಿ ಬಳಿಕ ಬರ್ತ್ ಡೇ ಆಚರಿಸಿಕೊಂಡಿದ್ದಾರೆ. ಬಳಿಕ ಡಿಜೆ ಹಾಡಿಗೆ ತಲ್ವಾರ್ ಹಿಡಿದು ಡಾನ್ಸ್ ಮಾಡಿದ್ದಾರೆ. ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದೂ ಅಲ್ಲದೇ ಸಾರ್ವಜನಿಕವಾಗಿ ತಲ್ವಾರ್ ಹಿಡಿದು ಕುಣಿದು ಕುಪ್ಪಳಿಸಿದ ಆರೋಪ ಹಿನ್ನೆಲೆಯಲ್ಲಿ 7 ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...