alex Certify ಹೂ ಬೆಳೆಗಾರರಿಗೆ ಬಂಪರ್‌ ಸುದ್ದಿ ನೀಡಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೂ ಬೆಳೆಗಾರರಿಗೆ ಬಂಪರ್‌ ಸುದ್ದಿ ನೀಡಿದ ಸಿಎಂ

 

ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಮಹತ್ವದ ಪತ್ರಿಕಾಗೋಷ್ಟಿ ನಡೆಸಿದ್ದು, ಕರೋನಾ ವೈರಸ್‌ ನಿಂದಾಗಿ ಘೋಷಿಸಲಾಗಿರುವ ಲಾಕ್‌ ಡೌನ್‌ ಪರಿಣಾಮ ಸಂಕಷ್ಟದಲ್ಲಿರುವವರಿಗೆ ರಿಲೀಫ್‌ ನೀಡಿದ್ದಾರೆ.

1610 ಕೋಟಿ ರೂಪಾಯಿ ಬೃಹತ್‌ ಮೊತ್ತದ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ, ಹೂವು ಬೆಳೆಗಾರರಿಗೆ ಹೆಕ್ಟೇರ್ ಗೆ ಸೀಮಿತವಾಗಿ 25 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 11,687 ಹೆಕ್ಟೇರ್ ಪ್ರದೇಶದಲ್ಲಿ ಹೂವು ಬೆಳೆಯಲಾಗಿದ್ದು, ಈ ರೈತರಿಗೆ ಪರಿಹಾರದ ಮೊತ್ತ ಸಿಗಲಿದೆ.

ಅಗಸರು ಹಾಗೂ ಕ್ಷೌರಿಕರಿಗೆ ತಲಾ 5 ಸಾವಿರ ರೂ ಪರಿಹಾರ ನೀಡಲು ನಿರ್ಧರಿಸಿದ್ದು, ಇದರಿಂದ ಸುಮಾರು 60 ಸಾವಿರ ಅಗಸರು ಹಾಗೂ 2 ಲಕ್ಷದ 30 ಸಾವಿರ ಕ್ಷೌರಿಕ ಸಮುದಾಯದವರಿಗೆ ಈ ನೆರವು ದೊರೆಯಲಿದೆ.

ಅಲ್ಲದೇ ರಾಜ್ಯದಲ್ಲಿರುವ 7 ಲಕ್ಷದ 75 ಸಾವಿರ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ತಲಾ 5 ಸಾವಿರ ರೂ. ಪರಿಹಾರ ನೀಡಲು ಸರ್ಕಾರ ಮುಂದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...