alex Certify ಹೆಚ್.ಎಸ್.ದೊರೆಸ್ವಾಮಿ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್.ಎಸ್.ದೊರೆಸ್ವಾಮಿ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ನಿಧನ ಸುದ್ದಿಕೇಳಿ ಆಘಾತವಾಗಿದೆ. ಅವರು ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದರು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಟ್ವಿಟರ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಸಿಎಂ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಅತೀವ ದುಃಖ ತಂದಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಕೂಡ ದೊರೆಸ್ವಾಮಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಹಿರಿಯಸ್ವಾತಂತ್ರ ಹೋರಾಟಗಾರರನ್ನು, ನಾಡಿನ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕನನ್ನು ಕಳೆದುಕೊಂಡಿರುವುದು ದುಃಖ ತಂದಿದೆ ಎಂದಿದ್ದಾರೆ.

ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ದೊರೆಸ್ವಾಮಿ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದು, ಹಿರಿಯ ಸ್ವಾತಂತ್ರ್ಯ ಸೇನಾನಿ, ಎಚ್.ಎಸ್. ದೊರೆಸ್ವಾಮಿಯವರ ನಿಧನ ನನಗೆ ಆಘಾತ ಉಂಟುಮಾಡಿದೆ.‌ ಮನೆ ಹಿರಿಯನನ್ನು ಕಳೆದುಕೊಂಡ ದುಃಖ ನನ್ನದಾಗಿದೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...