
ಹಾಸನ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಲವಾರು ಸಚಿವರು, ಶಾಸಕರು ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಕೊರೊನಾ ಪಾಸಿಟೀವ್ ಬಂದಿದೆ.
ಇತ್ತೀಚೆಗಷ್ಟೇ ರೇವಣ್ಣ ಅವರ ಬೆಂಗಾವಲು ಪಡೆಯ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಆ ಸಂದರ್ಭದಲ್ಲಿ ರೇವಣ್ಣ ಅವರ ವರದಿಯಲ್ಲಿ ನೆಗೆಟೀವ್ ಬಂದಿತ್ತು.
ಆದರೆ ಇದೀಗ ಹೆಚ್.ಡಿ. ರೇವಣ್ಣ ಅವರಿಗೆ ಮಾಡಲಾಗಿದ್ದ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.