ಬೆಂಗಳೂರು: ಕಂಠೀರವ ಕ್ರೀಡಾಂಗಣ ಶೀಘ್ರದಲ್ಲಿಯೇ ಸಂಪೂರ್ಣ ಹೊಸ ಮಾದರಿ, ಹೈಟೆಕ್ ರೂಪದಲ್ಲಿ ತಲೆ ಎತ್ತಲಿದೆ. ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣದ ಉನ್ನತೀಕರಣಕ್ಕೆ ಸರ್ಕಾರ ಮುಂದಾಗಿದೆ. ಈ ಮೂಲಕ ಅತ್ಯಾಧುನಿಕ ಶೈಲಿಯಲ್ಲಿ ಸುಸಜ್ಜಿತ ಕ್ರೀಡಾಂಗಣವೊಂದು ತಲೆ ಎತ್ತಲಿದೆ.
ಈ ಕುರಿತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ ಮಾಹಿತಿ ನೀಡಿದ್ದು, ಕಂಠೀರವ ಕ್ರೀಡಾಂಗಣವನ್ನ ಪಿಪಿಪಿ ಮಾದರಿಯಲ್ಲಿ ಹೈಟೆಕ್ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಈಗಾಗಲೆ ಖಾಸಗಿ ಸಹಭಾಗಿತ್ವಕ್ಕಾಗಿ ಕಂಪೆನಿಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ. ಇನ್ನು 2 ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದರು.
ಶೀಘ್ರದಲ್ಲೇ ರಾಜ್ಯದಲ್ಲಿ ಸ್ಥಾಪನೆಯಾಗಲಿದೆ ಗುಜರಾತ್ ಮಾದರಿಯ ಸಾವಯವ ಕೃಷಿ ವಿ.ವಿ,
ಒಳಾಂಗಣ ಸೇರಿದಂತೆ ಇಡೀ ಕ್ರೀಡಾಂಗಣವನ್ನ ಹೈಟೆಕ್ ಮಾಡಲು ನೀಲನಕ್ಷೆ ಸಿದ್ದಪಡಿಸಲಾಗಿದೆ. ಬಹುಮಹಡಿ ಕಟ್ಟಡ, ತ್ರಿತಾರಾ ಹೊಟೆಲ್ ಮತ್ತು ಪಂಚತಾರಾ ಹೊಟೇಲ್ಗಳು, ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮಳಿಗೆಗಳು ಕೂಡ ಕ್ರೀಡಾಂಗಣದಲ್ಲಿ ಇರಲಿವೆ ಎಂದು ತಿಳಿಸಿದರು.