ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದ್ದು, ಸಾರ್ವಜನಿಕವಾಗಿ, ರಸ್ತೆಗಳಲ್ಲಿ ಆಚರಣೆ ಮಾಡುವಂತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ. ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಕೂಡ ಸಮ್ಮತಿ ಸೂಚಿಸಿದ್ದಾರೆ ಎಂದರು.
ಪಬ್, ರೆಸ್ಟೋರೆಂಟ್ ಗಳಲ್ಲಿ ಪಾರ್ಟಿ ಮಾಡಬಹುದು ಆದರೆ 50 ಜನರಿಗಿಂತ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ. ಕೋವಿಡ್ ನಿಯಮ ಪಾಲನೆ ಕಡ್ಡಾಯವಾಗಿದೆ ಎಂದು ಹೇಳಿದರು.