alex Certify ‘ಹೌದು ಹುಲಿಯಾ’ ಬಳಿಕ ಈಗ ‘ಹೇ ಸಿದ್ದರಾಮಯ್ಯ’….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೌದು ಹುಲಿಯಾ’ ಬಳಿಕ ಈಗ ‘ಹೇ ಸಿದ್ದರಾಮಯ್ಯ’….!

ವಿಧಾನಸಭಾ ಉಪ ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಭಾಷಣ ಮಾಡುವ ವೇಳೆ ಪೀರಪ್ಪ ಎಂಬಾತ ‘ಹೌದು ಹುಲಿಯಾ’ ಎಂದು ಕೂಗಿದ್ದು, ಭಾರೀ ಸುದ್ದಿಯಾಗಿತ್ತು.

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೀರಪ್ಪ ರಾತ್ರೋರಾತ್ರಿ ಫೇಮಸ್ ಆಗಿದ್ದರು. ಅಲ್ಲದೆ ಮಾಧ್ಯಮಗಳಲ್ಲಿ ಪೀರಪ್ಪ ಅವರ ಸಂದರ್ಶನವೂ ವರದಿಯಾಗಿತ್ತು.

ಇದೀಗ ಗುಳೇದಗುಡ್ಡ ಪಟ್ಟಣದಲ್ಲಿ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ, ‘ಹೇ ಸಿದ್ದರಾಮಯ್ಯ…. ಹೇ ಸಿದ್ದರಾಮಯ್ಯ…’ ಎಂದು ಪದೇ ಪದೇ ಕೂಗಿದ್ದಾನೆ. ಕೊನೆಗೆ ಪೊಲೀಸರು ಆತನನ್ನು ಸಭೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...