ಮಕ್ಕಳ ಮೇಲೆ ಒತ್ತಡ ಬೀಳುತ್ತದೆ ಹಾಗೂ ಅವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ನೀಡುವುದಕ್ಕೆ ಕಡಿವಾಣ ಹಾಕಿತ್ತು.
ಹೀಗಾಗಿ ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಇದರ ವಿಚಾರಣೆ ನಡೆದಿದೆ. ಈ ಸಂದರ್ಭದಲ್ಲಿ ತಮ್ಮ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಆನ್ ಲೈನ್ ಶಿಕ್ಷಣವನ್ನು ರಾಜ್ಯ ಸರ್ಕಾರ ನಿಷೇಧಿಸಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಆನ್ ಲೈನ್ ಶಿಕ್ಷಣಕ್ಕೆ ವಿರುದ್ಧವಾಗಿಲ್ಲ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮಕ್ಕಳ ಶಿಕ್ಷಣಕ್ಕಿಂತ ಅವರ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂಬ ಸರ್ಕಾರದ ನಿಲುವನ್ನು ತಿಳಿಸಿದ್ದು, ನ್ಯಾಯಪೀಠ ಮಂಗಳವಾರದಂದು ಈ ಕುರಿತು ಮಹತ್ವದ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.