alex Certify 13 ತಿಂಗಳ ಮಗು ಕೊರೊನಾಗೆ ಬಲಿ; ಕಂದಮ್ಮಗಳನ್ನು ಕಾಡುತ್ತಿದೆ ಮಹಾಮಾರಿ ಅಟ್ಟಹಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

13 ತಿಂಗಳ ಮಗು ಕೊರೊನಾಗೆ ಬಲಿ; ಕಂದಮ್ಮಗಳನ್ನು ಕಾಡುತ್ತಿದೆ ಮಹಾಮಾರಿ ಅಟ್ಟಹಾಸ

ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಕೊನೇ ಹಂತದಲ್ಲೇ ಮೂರನೇ ಅಲೆಯ ಆರ್ಭಟ ಶುರುವಾಗಿದೆಯೇ ಎಂಬ ಅನುಮಾನ ಆರಂಭವಾಗಿದೆ. ಮುಗ್ದ ಕಂದಮ್ಮಗಳು ಇದೀಗ ಕೋವಿಡ್ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ.

13 ತಿಂಗಳ ಮಗು ಕೊರೊನಾ ಸೋಂಕಿಗೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಗು ಕೊನೆಯುಸಿರೆಳೆದಿದೆ. 13 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ನಿನ್ನೆ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಈಗ ಮೃತಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...