ಬೆಂಗಳೂರು: ಡಿ.ಕೆ ಶಿವಕುಮಾರ್ ಅವರ ಸದಾಶಿವ ನಗರ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದೀಗ ರಾಮನಗರ ಜಿಲ್ಲೆಯ ದೊಡ್ಡಆಲಹಳ್ಳಿ ನಿವಾಸದ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ. ಸ್ಥಳಿಯ ಪೊಲೀಸರಿಗೂ ಯಾವುದೇ ರೀತಿಯ ಮಾಹಿತಿ ನೀಡದೇ ದಾಳಿ ನಡೆದಿದೆ. ಬೆಳಿಗ್ಗೆ 6 ಗಂಟೆಗೆ ಸಿಬಿಐ 8 ಅಧಿಕಾರಿಗಳ ತಂಡ ಏಕಾಏಕಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಸಿಬಿಐ ಎಸ್.ಪಿ. ಥಾಮ್ಸನ್ ಜೋಸ್ ನೇತೃತ್ವದಲ್ಲಿ 60ಕ್ಕೂ ಹೆಚ್ಚು ಅಧಿಕಾರಿಗಳು ಬೆಳಿಗ್ಗೆಯಿಂದ ಡಿಕೆ ಸಹೋದರರ ನಿವಾಸ, ಕಚೇರಿ ಹಾಗೂ ಒಡೆತನದ ಕಂಪನಿಗಳ ಮೇಲೆ ರೇಡ್ ನಡೆಸಿ ಶೋಧ ನಡೆಸಿದ್ದಾರೆ.
ಡಿ.ಕೆ. ಶಿವಕುಮಾರ್ ವಿರುದ್ಧ ಬ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಸಿಬಿಐ ತನಿಖೆ ನಡೆಸಲು ಅನುಮತಿ ನೀಡುವಂತೆ ಇ.ಡಿ. ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. 2019ರಲ್ಲಿ ಸರ್ಕಾರ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಡಿಕೆಶಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.