alex Certify 2ನೇ ಬಾರಿ ಸಿಸಿಬಿ ಮುಂದೆ ಹಾಜರಾದ ನಟ: ಈ ಬಾರಿ ಕಾದಿದ್ಯಾ ಸಂಕಷ್ಟ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2ನೇ ಬಾರಿ ಸಿಸಿಬಿ ಮುಂದೆ ಹಾಜರಾದ ನಟ: ಈ ಬಾರಿ ಕಾದಿದ್ಯಾ ಸಂಕಷ್ಟ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಎರಡನೇ ಬಾರಿ ಸಿಸಿಬಿ ವಿಚಾರಣೆಗೆ ಹಾಜರಾಗಿರುವ ನಟ ದಿಗಂತ್ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಸಿಬಿಯಿಂದ ಮತ್ತೆ ವಿಚಾರಣೆಗೆ ಹಾಜರಾಗುವಂತೆ ದಿಂಗತ್ ಗೆ ನೋಟೀಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಚಾಮರಾಜಪೇಟೆ ಸಿಸಿಬಿ ಕಚೇರಿಗೆ ನಟ ಹಾಜರಾಗಿದ್ದಾರೆ. ಶೂಟಿಂಗ್ ಸ್ಪಾಟ್ ನಿಂದ ನೇರವಾಗಿ ಸಿಸಿಬಿ ಕಚೇರಿಗೆ ಆಗಮಿಸಿದ ನಟನನ್ನು ಈಗಗಲೇ ಅಧಿಕಾರಿಗಳ ತಂಡ ವಿಚಾರಣೆಗೆ ಒಳಪಡಿಸಿವೆ.

ನಟ ದಿಗಂತ್ ಬಗ್ಗೆ ಡ್ರಗ್ಸ್ ಪೆಡ್ಲರ್ ಗಳು ಕೆಲ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೇ ದಿಗಂತ್ ಮೊಬೈಲ್ ನಲ್ಲಿ ಡ್ರಗ್ಸ್ ಪಾರ್ಟಿಗಳ ಕುರಿತು ಸಾಕ್ಷ್ಯಗಳು ಲಭ್ಯವಾಗಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ವಿಚಾರಣೆ ವೇಳೆ ದಿಗಂತ್ ಗೆ ಸಂಕಷ್ಟ ಎದುರಾಗಲಿದ್ದು, ನಟನನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...