alex Certify 2 ವಾರ ಸಂಪೂರ್ಣ ಲಾಕ್ ಡೌನ್ ಮಾಡಿ; ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2 ವಾರ ಸಂಪೂರ್ಣ ಲಾಕ್ ಡೌನ್ ಮಾಡಿ; ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಬೇಕೆಂದರೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಬೇಕು. ಎರಡು ವಾರ ಕಂಪ್ಲೀಟ್ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಪ್ರತಿದಿನ 50 ಸಾವಿರ ಆಸುಪಾಸಿನಲ್ಲಿದೆ. ಈ ಪ್ರಮಾಣ ಕಡಿಮೆಯಾಗಬೇಕು ಎಂದರೆ 2 ವಾರ ಕಂಪ್ಲೀಟ್ ಲಾಕ್ ಡೌನ್ ಮಾಡಬೇಕು. ಆಂಧ್ರಪ್ರದೇಶ, ದೆಹಲಿಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿದ್ದರು. ಹೀಗಾಗಿ ಇದೀಗ ಅಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಅದೇ ರೀತಿ ರಾಜ್ಯದಲ್ಲಿಯೂ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಬೇಕು ಎಂದರು.

ಬ್ಲಾಕ್ ಫಂಗಸ್ ಬಗ್ಗೆ ಜಾಗೃತರಾಗಿರಿ ಎಂದ ಡಿಸಿಎಂ ಅಶ್ವತ್ಥನಾರಾಯಣ್

ಇಂದಿನಿಂದ ಲಾಕ್ ಡೌನ್ ಜಾರಿಯಾಗಿರುವುದರಿಂದ ಬಡವರಿಗೆ ದಿನಸಿ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಫುಡ್ ಕಿಟ್ ವಿತರಣೆ ಮಾಡುತ್ತಿದ್ದೇವೆ. ಯಾರೂ ಕೂಡ ಹಸಿವಿನಿಂದ ಇರಬಾರದು ಎಂಬುದು ನಮ್ಮ ಉದ್ದೇಶ ಹಾಗಾಗಿ ಉಚಿತ ಫುಡ್ ಕಿಟ್ ವಿತರಿಸಲಾಗುತ್ತಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...