
20 ಅಡಿ ಎತ್ತರದ ಕಾಂಪೌಂಡ್ ಗೋಡೆಯನ್ನು ಪೈಪ್ ಸಹಾಯದಿಂದ ಹತ್ತಿ ಪಕ್ಕದ ಕಟ್ಟಡದ ಮೇಲಿಂದ ಇಳಿದು ಎಂಟು ಮಂದಿ ಬಾಲಕಿಯರು ಬಾಲಮಂದಿರದಿಂದ ಪರಾರಿಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಮಂಗಳವಾರ ಮಧ್ಯ ರಾತ್ರಿ 11:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಬಾಲಕಿಯರು ಪರಾರಿಯಾಗುತ್ತಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಬಾಲಕಿಯರು ಗೋಡೆ ಏರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಓರ್ವ ಬಾಲಕಿಯನ್ನು ಪತ್ತೆ ಮಾಡಲಾಗಿದೆ. ಎರಡು ತಿಂಗಳ ಹಿಂದಷ್ಟೇ ಇದೇ ಬಾಲಮಂದಿರದಿಂದ ಇಬ್ಬರು ಬಾಲಕಿಯರು ತಪ್ಪಿಸಿಕೊಂಡಿದ್ದರು ಎಂದು ಹೇಳಲಾಗಿದೆ.