2020 ಕೊನೆಗೊಳ್ಳುತ್ತಾ ಬರುತ್ತಿದೆ. ಹೀಗಾಗಿ ಮುಂಬರುವ 2021 ಕ್ಕೆ ಎಷ್ಟು ದಿನಗಳ ಕಾಲ ಸರ್ಕಾರಿ ರಜೆ ನೀಡಬೇಕೆಂಬುದರ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 2021 ನೇ ಸಾಲಿನಲ್ಲಿ 21 ಸಾರ್ವತ್ರಿಕ ರಜೆ ಮತ್ತು19 ನಿರ್ಬಂಧಿತ ರಜೆ ನೀಡಲು ಅನುಮೋದನೆ ಸಿಕ್ಕಿದೆ.
ಹಾಗೆಯೇ ಇಂದಿನ ಸಂಪುಟ ಸಭೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಾವಣೆಗೆ ನಿರ್ಧರಿಸಿದ್ದು, ಇನ್ನು ಮುಂದೆ ‘ಮರಾಠ ಸಮುದಾಯ ನಿಗಮ’ ಎಂದು ಬದಲಾವಣೆಯಾಗಲಿದೆ.