alex Certify 2023 ಕ್ಕೆ ಜೆಡಿಎಸ್ ಅಧಿಕಾರಕ್ಕೆ ಬಾರದಿದ್ದಲ್ಲಿ ರಾಜಕೀಯ ನಿವೃತ್ತಿ: ಹೆಚ್.ಡಿ. ರೇವಣ್ಣ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2023 ಕ್ಕೆ ಜೆಡಿಎಸ್ ಅಧಿಕಾರಕ್ಕೆ ಬಾರದಿದ್ದಲ್ಲಿ ರಾಜಕೀಯ ನಿವೃತ್ತಿ: ಹೆಚ್.ಡಿ. ರೇವಣ್ಣ ಘೋಷಣೆ

ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಜೆಡಿಎಸ್, ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಕಟುವಾಗಿ ಪ್ರತಿಕ್ರಿಯಿಸಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಇಂತಹ ಬೆಳವಣಿಗೆ ನಡೆದರೆ ತಾವು ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ಹೇಳಿದ್ದರು.

ಇದೀಗ ಮತ್ತೊಮ್ಮೆ ರಾಜಕೀಯ ನಿವೃತ್ತಿ ಮಾತುಗಳನ್ನಾಡಿರುವ ರೇವಣ್ಣ, 2023ಕ್ಕೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಾರದೆ ಹೋದಲ್ಲಿ ತಾವು ರಾಜಕೀಯದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿರುವ ಅವರು, ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...