alex Certify 23 ನಿಮಿಷಗಳಲ್ಲಿ ಮುಕ್ತಾಯಗೊಂಡ ವಿಶ್ವವಿಖ್ಯಾತ ಜಂಬೂ ಸವಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

23 ನಿಮಿಷಗಳಲ್ಲಿ ಮುಕ್ತಾಯಗೊಂಡ ವಿಶ್ವವಿಖ್ಯಾತ ಜಂಬೂ ಸವಾರಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಈ ಬಾರಿ ಕೇವಲ 23 ನಿಮಿಷಗಳಲ್ಲಿ ಮುಕ್ತಾಯಗೊಂಡಿದೆ. ಕೊರೊನಾ ಹಿನ್ನೆಲೆಯಲ್ಲಿ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ಜಂಬೂ ಸವಾರಿ ಮುಕ್ತಾಯಗೊಂಡಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆ ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ತುಂಬಾ ಸರಳವಾಗಿ, ಸಾಂಪ್ರದಾಯಿಕವಾಗಿ ಆಚರಿಸಲಾಗಿದ್ದು, ಜಂಬೂ ಸವಾರಿ ಕೂಡ ಈ ಬಾರಿ ಅರಮನೆಗೆ ಮಾತ್ರ ಸೀಮಿತವಾಗಿತ್ತು. 3.54 ನಿಮಿಷಕ್ಕೆ ಆರಂಭವಾದ ಜಂಬೂಸವಾರಿ 23 ನಿಮಿಷಗಳಲ್ಲಿ ಮುಕ್ತಾಯಗೊಂಡಿದೆ. ಅರಮನೆಯ ಆವರಣದಲ್ಲಿ ಕೇವಲ 400 ಮೀಟರ್ ಮಾತ್ರ ಸಾಗಿ ಬಲರಾಮ ದ್ವಾರದ ಬಳಿ ಜಂಬೂ ಸವಾರಿ ಮುಕ್ತಾಯಗೊಂಡಿದೆ.

ಈ ಬಾರಿ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೇವಲ ನಾಲ್ಕು ಕಲಾತಂಡಗಳು ಭಾಗಿಯಾಗಿದ್ದವು. ಅಶ್ವಾರೋಹಿ ದಳದ 2 ತುಕಡಿ, ಕರ್ನಾಟಕ ಪೊಲೀಸ್ ಬ್ಯಾಂಡ್ ನ ಆನೆಗಾಡಿ, ಕೊರೊನಾ ಜಾಗೃತಿ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದವು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...